ಮನೆಯಲ್ಲಿ ವರುಣಾದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ

0
9
siddaramaiah

ಚಿತ್ರದುರ್ಗ: ನಮ್ಮ ಮನೆಯಲ್ಲಿ ವರುಣಾದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವರುಣಾ ಕ್ಷೇತ್ರದಲ್ಲೇ ಟಿಕೆಟ್ ನೀಡುವಂತೆ ಹೇಳಿದ್ದೇನೆ. ಆದರೆ, ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆಯೂ ನಮ್ಮ ಮನೆಯಲ್ಲಿ ಹೇಳ್ತಿದ್ದಾರೆ. 25 ಕ್ಷೇತ್ರಗಳಲ್ಲಿ ನನಗೆ ಸ್ಪರ್ಧಿಸುವಂತೆ ಆಹ್ವಾನವಿದೆ. ಎಲ್ಲಾ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದೇನೆಂದ ಹೇಳಿದರು.
ಬಿಜೆಪಿಯವರು ಹಿಂದೂ-ಮುಸ್ಲಿಂರು ಅಣ್ಣ ತಮ್ಮಂದಿರಂತೆ ಕಾಣುತ್ತದೆ ಎಂದು ಬಿಎಸ್‌ವೈ ಹೇಳಿಕೆ ವಿಚಾರವಾಗಿ ಮಾತನಾಡಿ, ಬಿಜೆಪಿ ಮುಸ್ಲಿಂರಿಗೇಕೆ ಟಿಕೆಟ್ ನೀಡಲ್ಲ, ಮಂತ್ರಿ ಮಾಡಲ್ಲ ಎಂದು ಕಿಡಿಕಾರಿದರು.

Previous articleಲೋಕಸಭಾ ಸದಸ್ಯತ್ವದಿಂದ ರಾಹುಲ್‌ ಗಾಂಧಿ ಅನರ್ಹ
Next articleರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್‌ ವಶಕ್ಕೆ