Home ನಮ್ಮ ಜಿಲ್ಲೆ ಉತ್ತರ ಕನ್ನಡ ಮರದ ಪೀಠೋಪಕರಣ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ

ಮರದ ಪೀಠೋಪಕರಣ ತಯಾರಿಕಾ ಘಟಕದಲ್ಲಿ ಬೆಂಕಿ ಅವಘಡ

0

ಅಂಬೇವಾಡಿಯಲ್ಲಿನ ಮರದ ಪೀಠೋಪಕರಣ ತಯಾರಿಕೆ ಹಾಗೂ ಮಾರಾಟ ಮಳಿಗೆಯಲ್ಲಿ ಶುಕ್ರವಾರ ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿ ಅಪಾರ ಹಾನಿ ಉಂಟಾಗಿದೆ. ತಡರಾತ್ರಿ ಜೋರಾಗಿ ಮಳೆ ಬಂದು, ವಿದ್ಯುತ್ ಶಾರ್ಟ್ ಸರ್ಕೀಟ್ ಆಗಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾದರು. ಬೆಳಗಿನ ಜಾವದವರೆಗೂ ಬೆಂಕಿ ಸಂಪೂರ್ಣ ಹತೋಟಿಗೆ ಬರಲಿಲ್ಲ. ಮಳಿಗೆಯಲ್ಲಿ ಪೀಠೋಪಕರಣ ಸಂಪೂರ್ಣ ಸುಟ್ಟು ಕರಕಲಾಗಿದೆ. ಅಕ್ಕಪಕ್ಕದ ಕೆಲವು ಅಂಗಡಿಗಳಿಗೂ ಬೆಂಕಿ ತಾಗಿದ್ದು ಆಲ್ಪಸ್ವಲ್ಪ ಪ್ರಮಾಣದ ಹಾನಿ ಉಂಟಾಗಿದೆ. ಸ್ಥಳಕ್ಕೆ ಡಿವೈಎಸ್ಪಿ ಸಿಪಿಐ, ಪಿಎಸ್ಐ, ಹಾಗೂ ಹೆಸ್ಕಾಂ ಸಿಬ್ಬಂದಿ ಸ್ಥಳದಲ್ಲಿ ಬೆಂಕಿ ನಂದಿಸಲು ಸಹಕರಿಸುತ್ತಿದ್ದಾರೆ.

Exit mobile version