ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳಲ್ಲಿ ಮಳೆ ಚುರುಕುಗೊಂಡಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಭದ್ರಾ ನದಿ, ಕಾಳಿ ನದಿ ಉಕ್ಕಿ ಹರಿಯುತ್ತಿದೆ. ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಳವಾಗಿ ನದಿ ದಡಕ್ಕೆ ಹೋಗದಂತೆ ಭಕ್ತರಿಗೆ ಸೂಚನೆ ನೀಡಲಾಗಿದೆ. ದಕ್ಷಿಣ ಮಂದಾಕಿನಿ ಕಾವೇರಿ ನದಿ ನೀರಿನ ಮಟ್ಟದಲ್ಲಿ ಗಣನೀಯ ಏರಿಕೆಯಾಗಿದ್ದು ಭಾಗಮಂಡಲ ತ್ರಿವೇಣಿ ಸಂಗಮ ಜಲಾವೃತಗೊಂಡಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಕದ್ರಾ ಡ್ಯಾಂನಿಂದ ನೀರು ಬಿಡುಗಡೆ ಹಿನ್ನೆಲೆ ಮಹಾಮಾಯ ದೇಗುಲದ ಆವರಣ ಜಲಾವೃತಗೊಂಡಿದೆ. ಕದ್ರಾ ಡ್ಯಾಂ ಸುತ್ತಮುತ್ತಲಿನ 100ಕ್ಕೂ ಅಧಿಕ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಗ್ರಾಮಸ್ಥರಿಗೆ ಸೂಚನೆ ನೀಡಿದೆ.