ಮಹಾರಾಷ್ಟ್ರ: ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಬಸ್‌ಗೆ ಬೆಂಕಿ

0
40
ಬೆಂಕಿ

ಬೆಳಗಾವಿ: ಮರಾಠಾ ಮೀಸಲಾತಿ ಕಿಚ್ಚಿಗೆ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿಗಾಹುತಿಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ವಡಿಗೋದ್ರಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ
ಔರಂಗಾಬಾದ್ – ಹುಬ್ಬಳ್ಳಿ ಮಾರ್ಗದ ಕರ್ನಾಟಕ ಸಾರಿಗೆ ಬಸ್‌ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯ ಅಂಬಡ್ ತಾಲೂಕಿನ ವಡಿಗೋದ್ರಿ ಗ್ರಾಮದ ಹದ್ದಿಯಲ್ಲಿ ಈ ಘಟನೆ ನಡೆದಿದೆ.

ಮರಾಠಾ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಹಿಂಸಾಚಾರ ನಡೆದಿದ್ದು ಶಿಕ್ಷಣ ಮತ್ತು ಉದ್ಯೋಗದಲ್ಲಿ ಮರಾಠಾ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಧರಣಿ ನಡೆದಿತ್ತು. ಜಾಲಾ ಜಿಲ್ಲೆಯ ಶಹಾಗಡ್‌ನಲ್ಲಿ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಪ್ರತಿಭಟನೆ ಈಗ ಹಿಂಸಾಚಾರಕ್ಕೆ ತಿರುಗಿದೆ.

Previous articleಮಾಜಿ ಶಾಸಕ ಆಲಮೇಲಕರ ಕೋಮಾಗೆ
Next articleಪಕ್ಷಾಂತರ ನಿಷೇಧ ಕಾಗದದ ಹುಲಿ