ಮಾಂಸ ತಿಂದು ದೇವಸ್ಥಾನಕ್ಕೆ ಬಂದ ಸಿ.ಟಿ ರವಿ: ಫೋಟೋ ವೈರಲ್‌

0
13
ಸಿ ಟಿ ರವಿ

ಹುಬ್ಬಳ್ಳಿ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಚಿಕ್ಕಮಗಳೂರು ಶಾಸಕ ಸಿ.ಟಿ ರವಿ ಭರ್ಜರಿ ಬಾಡೂಟ ಸವಿದು ದೇವರ ದರ್ಶನ ಮಾಡಿದ್ದು, ಇದೀಗ ವಿವಾದಕ್ಕೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ಹರಿದಾಡುತ್ತಿದೆ.
ರವಿವಾರ ಫೆ. 19ರಂದು ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದ ಅವರು, ಈ ವೇಳೆ ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ ಮನೆಯಲ್ಲಿ ಮಾಂಸದೂಟ ಮಾಡಿ ಸಂಜೆ
ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಅವರು ಊಟ ಮಾಡಿರುವ ಮತ್ತು ದೇವಸ್ಥಾನಕ್ಕೆ ಭೇಟಿ ನೀಡಿರುವ ಪೋಟೋಗಳು ವೈರಲ್‌ ಆಗಿದ್ದು, ಆಸ್ತಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Previous articleರೂಪಾ-ರೋಹಿಣಿಯನ್ನು ಅಮಾನತು ಮಾಡಿ
Next articleರೈಲು ಸಂಚರಿಸುತ್ತಿದ್ದಾಗಲೇ ಮುರಿದು ಬಿದ್ದ ವಿದ್ಯುತ್ ಸಂಪರ್ಕ ಕಂಬಿ