ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

0
36
ಎಚ್.ಡಿ ದೇವೇಗೌಡ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ದೇವೇಗೌಡರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಬಹಳ ಆತ್ಮೀಯವಾಗಿ, ಲವಲವಿಕೆಯಿಂದ ಮಾತನಾಡಿದ್ದಾರೆ. ಸಾಕಷ್ಟು ಹಳೆಯ ವಿಚಾರಗಳನ್ನು ಮೆಲಕು ಹಾಕಿದರಲ್ಲದೆ ರಾಜ್ಯಕ್ಕೆ ಒಳ್ಳೆಯದು ಮಾಡಬೇಕೆಂಬ ನಿಟ್ಟಿನಲ್ಲಿ ಅವರ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ, ನೂರ್ಕಾಲ ಚೆನ್ನಾಗಿ ಬಾಳಲಿ. ರಾಜ್ಯಕ್ಕೆ ಅವರಿಂದ ಇನ್ನಷ್ಟು ಮಾರ್ಗದರ್ಶನ ಸಿಗುವಂತಾಗಲಿ ಎಂದು ತಿಳಿಸಿದರು.

Previous articleಕ್ಯೂಆರ್‌ ಕೋಡ್‌ನಲ್ಲಿ ರಾಹುಲ್‌‌ ಗಾಂಧಿ ಫೋಟೋ ಹಾಕಿ ಭಿಕ್ಷೆ ಬೇಡಬಹುದಲ್ಲವೇ?: ಬಿಜೆಪಿ
Next articleಪೇ ಸಿಎಂ ಅಭಿಯಾನ: ಹೆಸರು ಕೆಡಿಸಲು ಷಡ್ಯಂತ್ರ ಸಿಎಂ ಬೊಮ್ಮಾಯಿ