Home ತಾಜಾ ಸುದ್ದಿ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿ 100ನೇ ಜನ್ಮದಿನಾಚರಣೆ

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಆರ್.ಬೊಮ್ಮಾಯಿ 100ನೇ ಜನ್ಮದಿನಾಚರಣೆ

0

ಹುಬ್ಬಳ್ಳಿ : ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಮಾನವ ಸಂಪನ್ಮೂಲ ಮಾಜಿ ಸಚಿವರಾಗಿದ್ದ ದಿವಂಗತ ಎಸ್.ಆರ್. ಬೊಮ್ಮಾಯಿ ಅವರ 100 ನೇ ಜನ್ಮದಿನವನ್ನು ಹುಬ್ಬಳ್ಳಿಯಲ್ಲಿ ಆಚರಿಸಲಾಯಿತು.
ಎಸ್.ಆರ್. ಬೊಮ್ಮಾಯಿ ಅವರ ಮೂರ್ತಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿಯವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಸಭಾನಾಯಕರಾದ ತಿಪ್ಪಣ್ಣ ಮಜ್ಜಿಗಿ, ಪಾಲಿಕೆಯ ಸದಸ್ಯರಾದ ರಾಜಣ್ಣ ಕೊರವಿ, ಉಮೇಶಗೌಡ ಕೌಜಗೇರಿ, ಮಾಜಿ ಮಹಾಪೌರ ಪಾಂಡುರಂಗ ಪಾಟೀಲ, ವಿಜಯಾನಂದ ಹೊಸಕೋಟಿ, ಪಾಲಿಕೆಯ ಅಧಿಕಾರಿಗಳಾದ ಎಸ್.ಸಿ. ಬೇವೂರ, ಆನಂದ ಕಾಂಬ್ಳೆ, ಡಾ.ಶ್ರೀಧರ ದಂಡಪ್ಪನವರ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version