ಮೀಸಲಾತಿ: ಸರ್ಕಾರಕ್ಕೆ ಬಿಗ್ ರಿಲೀಫ್

0
25
ಹೈ ಕೋರ್ಟ್

ಬೆಂಗಳೂರು: ಲಿಂಗಾಯತ ಪಂಚಮಸಾಲಿಗೆ 2ಸಿ, 2ಡಿ ಮೀಸಲಾತಿ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್ ಇಂದು ತೆರವುಗೊಳಿಸಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದ್ದರಿಂದ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡಬಾರದು ಮತ್ತು ಮೀಸಲು ಪ್ರವರ್ಗ ಮಾರ್ಪಾಡು ಮಾಡುವಂತೆ ಕೋರಿ ಯಾವುದೇ ಉಪಜಾತಿ, ಸಮುದಾಯ ಬುಡಕಟ್ಟುಗಳು ಸಲ್ಲಿಸುವ ವೈಯಕ್ತಿಕ ಬೇಡಿಕೆಗಳನ್ನು ರಾಜ್ಯ ಸರ್ಕಾರ ಪ್ರೋತ್ಸಾಹಿಸದಂತೆ ತಡೆ ನೀಡಬೇಕೆಂದು ಡಿ.ಜಿ.ರಾಘವೇಂದ್ರ ಎಂಬುವರು ಪಿಐಎಲ್​ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮುಖ್ಯ ನ್ಯಾಯಪೀಠ ಮಧ್ಯಂತರ ತಡೆ ನೀಡಿತ್ತು.
2ಎ ಮೀಸಲಾತಿಯಲ್ಲಿ ಯಾವುದೇ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್​​ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿದರು. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿ ಈಗ ಹೊಸ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಿದೆ. ಅಲ್ಲದೇ ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕೆಂದು ಸೂಚನೆ ನೀಡಿ ಮಧ್ಯಂತರ ಆದೇಶ ತೆರವುಗೊಳಿಸಿದೆ.

Previous articleಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದ 9 ಕೆಜಿ ಚಿನ್ನ ವಶ
Next articleರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸ ಓದಿಕೊಳ್ಳಲಿ