80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುವುದು ಎಂದು ಪ್ರದಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಅವರು ಛತ್ತೀಸ್‌ಗಢದಲ್ಲಿ ನಡೆದ ಚುನಾವಣೆ ರ‍್ಯಾಲಿಯಲ್ಲಿ ಮಾತನಾಡಿ “ನಮ್ಮ ಸರ್ಕಾರದ ಐದು ವರ್ಷದ ಆಡಳಿತದ ಅವಧಿಯಲ್ಲಿಯೇ ದೇಶದ 13.5 ಕೋಟಿ ಜನ ಬಡತನದಿಂದ ಹೊರಬಂದಿದ್ದಾರೆ. ನಿಮ್ಮ ಆಶೀರ್ವಾದ, ಸ್ಫೂರ್ತಿಯೇ ನನಗೆ ಮಹತ್ವದ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಇನ್ನೂ ಐದು ವರ್ಷಗಳವರೆಗೆ ಪಿಎಂಜೆಕೆವೈ ಯೋಜನೆ ಅಡಿಯಲ್ಲಿ 80 ಕೋಟಿ ಜನರಿಗೆ ಉಚಿತವಾಗಿ ಆಹಾರ ಧಾನ್ಯ ವಿತರಿಸಲಾಗುತ್ತದೆ” ಎಂದು ಘೋಷಣೆ ಮಾಡಿದರು. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ (PMGKY) ಅಡಿಯಲ್ಲಿ ಇನ್ನೂ 5 ವರ್ಷ ದೇಶದ 80 ಕೋಟಿ ಬಡವರಿಗೆ ಉಚಿತವಾಗಿ ಆಹಾರ ಧಾನ್ಯ ನೀಡಲಾಗುವುದು ಎಂದು ಹೇಳಿದ್ದಾರೆ.