ನವದೆಹಲಿ: ಸುಳ್ಳು ಸುದ್ದಿಗಳಿಗೆ ಯಾರೂ ಕಿವಿಗೊಡಬೇಡಿ ಎಂದು ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ತಿಳಿಸಿದ್ದಾರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸುರ್ಜೇವಾಲ ಅವರು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ. ಮುಖ್ಯಮಂತ್ರಿ ಆಯ್ಕೆ ಬಗ್ಗೆ ಎಐಸಿಸಿ ಅಧ್ಯಕ್ಷ ಖರ್ಗೆ ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು. ಕ್ಯಾಬಿನೆಟ್‌ನಲ್ಲಿ 5 ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ. ಪ್ರತೀ ಯೋಜನೆಗಳನ್ನು ಈಡೇರಿಸುತ್ತೇವೆ. ಮುಂದಿನ 48ರಿಂದ 78 ಗಂಟೆಯೊಳಗೆ ಹೊಸ ಸರಕಾರ ಅಸ್ತಿತ್ವದಲ್ಲಿ ಇರಲಿದೆ ಎಂದಿದ್ದಾರೆ.