Home ತಾಜಾ ಸುದ್ದಿ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

0
ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಟಿಕೆಟ್ ನೀಡಲು ಆಗ್ರಹ

ರಾಯಚೂರು: ನಗರ ವಿಧಾನಸಭಾ ಕ್ಷೇತ್ರಕ್ಕೆ ಮುಸ್ಲಿಂ ಸಮುದಾಯದವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ಭಾನುವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಅಲ್ಪಸಂಖ್ಯಾತರ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ಎರಡನೇ ಪಟ್ಟಿ ಬಿಡುಗಡೆ ಪೂರ್ವದಲ್ಲಿಯೇ ಪ್ರತಿಭಟನೆ ಬಿಸಿ ತಟ್ಟಿತು.
ನೂರಾರು ಸಂಖ್ಯೆಯ ಅಲ್ಪಸಂಖ್ಯಾತರು ಘೋಷಣೆ ಕೂಗಿ, ಕಾಂಗ್ರೆಸ್ ಟಿಕೆಟ್ ನಮ್ಮ ಹಕ್ಕು ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಾಯಚೂರು ಜಿಲ್ಲೆಯಲ್ಲಿ 7 ವಿಧಾನಸಭಾ ಕ್ಷೇತ್ರಗಳಿವೆ ಸುಮಾರು 3 ಲಕ್ಷಕ್ಕೂ ಹೆಚ್ಚು ಅಲ್ಪಸಂಖ್ಯಾತರ ಮತಗಳಿವೆ. ಆದರೂ ಅಲ್ಪಸಂಖ್ಯಾತರನ್ನ ಕಡೆಗಣಿಸಲಾಗಿದೆ ಎಂದು ದೂರಿದರು. ಟಿಕೆಟ್ ನೀಡದೇ ಹೋದಲ್ಲಿ ಪಕ್ಷ ಬದಲಾವಣೆ ಎಚ್ಚರಿಕೆ ನೀಡಿದರು.
ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಟಿಕೆಟ್‌ಗೆ ಯಾರ ಹೆಸರನ್ನು ಶಿಫಾರಸು ಮಾಡಿದೆ ಎನ್ನುವ ಬಗ್ಗೆ ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ ಬಿ.ವಿ ನಾಯಕ ಅವರನ್ನು ಪ್ರತಿಭಟನಾಕಾರರು ಒತ್ತಾಯಿಸಿದರು.