ಬೆಂಗಳೂರು: ಮಳೆ ಬಂದಾಗ ಸಮಸ್ಯೆ ಉಂಟಾಗಿ ಬೆಂಗಳೂರು ನಗರಕ್ಕೆ ಕೆಟ್ಟ ಹೆಸರು ಬರಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಅಧಿಕಾರಿಗಳೊಂದಿಗೆ ಬಿಎಂಟಿಸಿಯ ವೊಲ್ವೋ ಬಸ್ ಮೂಲಕ ನಗರ ಪರಿವೀಕ್ಷಣಾ ಸಂಚಾರ ನಡೆಸಿದ ಡಿಸಿಎಂ ಬಳಿಕ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡರು. ಬೆಂಗಳೂರು ನಗರ ಐಟಿ ಕ್ಷೇತ್ರದಲ್ಲಿ ಜಾಗತಿಕವಾಗಿ ಗುರುತಿಸಿಕೊಂಡಿದ್ದು ಈ ಕೀರ್ತಿಯನ್ನು ಇನ್ನಷ್ಟು ಹೆಚ್ಚಿಸಲು ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಬೆಂಗಳೂರಿನ ಹಲವು ಒಳಚರಂಡಿ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ. ಬಿಬಿಎಂಪಿ ಆಯುಕ್ತರು ಕೆಲವೊಂದು ವಿಷಯಗಳ ಬಗ್ಗೆ ಬೆಳಕು ಚೆಲ್ಲಿದ್ದಾರೆ, ಅವುಗಳ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸಲಾಗುತ್ತದೆ ಎಂದು ಡಿಕೆಶಿ ಹೇಳಿದರು.



























