Home ತಾಜಾ ಸುದ್ದಿ ಮೆಟ್ರೋದಲ್ಲಿ ಮಿನಿಸ್ಟರ್‌

ಮೆಟ್ರೋದಲ್ಲಿ ಮಿನಿಸ್ಟರ್‌

0

ಬೆಂಗಳೂರು: ಮೈಲಸಂದ್ರ- ಶ್ರೀನಿವಾಸಪುರದಲ್ಲಿ ಬುಧವಾರ ನಿಗದಿಯಾಗಿದ್ದ ಜೆಎಸ್ಎಸ್ ಶಿಕ್ಷಣ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ವಿಧಾನಸೌಧದಿಂದ ಕೆಂಗೇರಿ ಬಸ್ ಟರ್ಮಿನಲ್ ವರೆಗೆ `ನಮ್ಮ ಮೆಟ್ರೋ’ದಲ್ಲಿ ಪ್ರಯಾಣ ಮಾಡಿ ಈ ಬಗ್ಗೆ ಮಾತನಾಡಿದ ಅವರು, ‘ದೇಶದ ಬೇರೆ ಬೇರೆ ಭಾಗಗಳಲ್ಲಿ ನಾನು ಮೆಟ್ರೋದಲ್ಲಿ ಸಂಚರಿಸಿ, ಅನುಭವ ಪಡೆದಿದ್ದೇನೆ. #ನಮ್ಮಮೆಟ್ರೋ’ದಲ್ಲಿ ಪ್ರಯಾಣ ಮಾಡಿದ್ದು ಖುಷಿ ತಂದಿದೆ. ಮೆಟ್ರೋ ಸೌಲಭ್ಯವು ನಗರದ ಸಂಚಾರ ವ್ಯವಸ್ಥೆಯ ರೂಪುರೇಷೆಗಳನ್ನೇ ಆಮೂಲಾಗ್ರವಾಗಿ ಬದಲಿಸುತ್ತಿದೆ. ಬೆಂಗಳೂರಿನ ಉತ್ಪಾದಕತೆ ಗಣನೀಯವಾಗಿ ಹೆಚ್ಚಲಿದೆ. ಶಬ್ದ, ಧೂಳು ಮತ್ತು ಇಂಗಾಲದ ಮಾಲಿನ್ಯಗಳಿಗೆ ಪರಿಹಾರವಾಗಿದೆ. ಆರೋಗ್ಯದ ಸಮಸ್ಯೆಗಳಿಂದಲೂ ತಕ್ಕ ಮಟ್ಟಿಗೆ ಪಾರಾಗಬಹುದು ಎಂದರು.

Exit mobile version