ಮೊದಲ ದಿನವೇ ಸಾಹುಕಾರ ನಾಮಪತ್ರ ಸಲ್ಲಿಕೆ

ಜಾರಕಿಹೊಳಿ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಮೊದಲ ದಿನವೇ ಮಾಜಿ ಸಚಿವ, ಗೋಕಾಕ್‌ ಶಾಸಕ ರಮೇಶ್‌ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದಾರೆ. ಗೋಕಾಕ್ ತಹಶೀಲ್ದಾರ್‌ ಕಚೇರಿಗೆ ತೆರಳಿದ ರಮೇಶ್ ಜಾರಕಿಹೊಳಿ ಗೋಕಾಕ್ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಗೀತಾ ಕೌಲಗಿ ಅವರಿಗೆ ನಾಮಪತ್ರ ಸಲ್ಲಿಸಿದರು.