ಬೆಂಗಳೂರು: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮೊದಲ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ಆರಂಭವಾಗಿದೆ.
ಸಿಎಂ, ಡಿಸಿಎಂ ಸೇರಿದಂತೆ ಎಂಟು ಜನ ಸಚಿವರು ಮೊದಲ ಸಚಿವ ಸಂಪುಟದ ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ಐದು ಗ್ಯಾರಂಟಿಗಳ ಜಾರಿ ಮಾಡಲು ಮಹತ್ವದ ಚರ್ಚೆ ನಡೆದಿದೆ.
ಗ್ಯಾರಂಟಿ ನಂ.1 ಗೃಹಲಕ್ಷ್ಮೀ ಯೋಜನೆಯಡಿ ಮನೆ ಯಜಮಾನಿಗೆ ಮಾಸಿಕ 2000 ರೂ. ಸಹಾಯಧನ.
ಗ್ಯಾರಂಟಿ ನಂ.2 ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತ.
ಗ್ಯಾರಂಟಿ ನಂ.3 ಅನ್ನಭಾಗ್ಯ ಯೋಜನೆಯಡಿ ಪ್ರತಿಯೊಬ್ಬರಿಗೆ 10 ಕೆಜಿ ಅಕ್ಕಿ ಉಚಿತ.
ಗ್ಯಾರಂಟಿ ನಂ.4 ಯುವನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಪದವೀಧರರಿಗೆ 3000, ಡಿಪ್ಲೋಮದವರಿಗೆ 1500 ರೂ ಮಾಸಿಕ ಭತ್ಯೆ.
ಗ್ಯಾರಂಟಿ ನಂ.5 ಸಖಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ.
ಈ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಮೊದಲ ಸಂಪುಟ ಸಭೆಯಲ್ಲಿ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭರವಸೆ ನೀಡಿದ್ದಾರೆ.