ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ತಗುಲಿ ಯುವಕ ಸಾವು

ಬೆಳಗಾವಿ : ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ತಗುಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಶ್ರೀಪೆವಾಡಿಯಲ್ಲಿ ನಡೆದಿದೆ.
ಈ ಘಟನೆಯಲ್ಲಿ ಆಕಾಶ ಶಿವದಾಸ ಸಂಕಪಾಳ (27) ಮೃತಪಟ್ಟಿರುವ ದುರ್ಧೈವಿಯಾಗಿದ್ದಾನೆ. ದಿ. 27ರಂದು ಮುಂಜಾನೆ 8:45ರ ಸುಮಾರಿಗೆ ಈ ಘಟನೆ ನಡೆದಿದ್ದು, ಈ ಬಗ್ಗೆ ಮೃತನ ತಂದೆ ಶಿವದಾಸ ಬಳವಂತ ಸಂಕಪಾಳ ಇವರು ಪೊಲೀಸರಿಗೆ ದೂರು ನೀಡಿದ್ದು, ಈ ಬಗ್ಗೆ ನಿಪ್ಪಾಣಿ ಬಿಸಿಪಿಎಸ್ ಯುಡಿ ನಂಬರ 08/2023 ಕಲಂ:174 CRPC ಪ್ರಕಾರ ಪ್ರಕರಣ ದಾಖಲಾಗಿದೆ.