ಹುಬ್ಬಳ್ಳಿ: ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಮಾಡಿದ ಸಾಧನೆ ಪ್ರಚಾರ ಗಿಟ್ಟಿಸಿಕೊಳ್ಳೋದು, ಬಿಟ್ಟು ದೇಶಕ್ಕೆ ಯಾವುದೇ ಲಾಭವಾಗಿಲ್ಲ ಎಂದು ಸಚಿವ ಸಂತೋಷ ಲಾಡ್ ಕಿಡಿಕಾರಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅವರು 10 ವರ್ಷ ಆಯ್ತು ಲೋಕ್ ಪಾಲ್ ಬಗ್ಗೆ ಪಾರ್ಲಿಮೆಂಟ್‌ನಲ್ಲಿ ಮಾತನಾಡುತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷದ ಬಗ್ಗೆ ಬಹಳ ಮಾತನಾಡುತ್ತಿದ್ದಾರೆ. ಈಗಾಗಲೇ ಕ್ಯಾಗ್ ರಿಪೋರ್ಟ್ ಬಂದಾಗಿದೆ. ರೆಫೈಲ್ ಡೀಲ್ ಮುಚ್ಚಿ ಹೋಗಿದೆ. ನಾನು ಮಾತನಾಡಲ್ಲ, ಈಗಿರುವ ಕ್ಯಾಗ್ಸ್ ರಿಪೋರ್ಟ್‌ನಲ್ಲಿ 6 ಜಾಗದಲ್ಲಿ ಸ್ಕ್ಯಾಮ್ ಆಗಿದೆ. ದೇಶ ಡೆಮೋಕ್ರೆಸಿ ಸೇಟಿಫೈನಲ್ಲಿ ನಡೀತಾ ಇಲ್ಲಾ ಎಂದು ಕಳವಳ ವ್ಯಕ್ತಪಡಿಸಿದರು.
ಇಂದಿರಾ ಗಾಂಧಿ, ಮನಮೋಹನ ಸಿಂಗ್ ಸೇರಿದಂತೆ ಹಲವರ ಕಾಲದಲ್ಲಿ ಆಗಿರುವ ಕೇಂದ್ರ ಸರ್ಕಾರದ ಸೆಂಟರ್‌ಗಳು ಹೆಚ್ಚು ಮಾರಾಟ ಆಗಿರೋದು ಬಿಜೆಪಿಯವರ ಕಾಲದಲ್ಲಿ, ಪ್ರಚಾರ ಗಿಟ್ಟಿಸಿಕೊಳ್ಳೋದನ್ನ ಬಿಟ್ರೆ ಪ್ರಧಾನಿ ಮೋದಿ ಕಳೆದ 10 ವರ್ಷದಲ್ಲಿ ದೇಶಕ್ಕೆ ಯಾವುದೇ ಲಾಭ ಆಗಿಲ್ಲ. ಚುನಾವಣೆ ಇದೆ ಗಿಮಿಕ್ ಸಹಿತ ನಡಿಯುತ್ತದೆ.. ಸಾವಿರಾರು ಕೋಟಿ ಸರ್ಕಾರದ ದುಡ್ಡು ಖರ್ಚು ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳೋದು ಅವರ ತಂತ್ರ. ಮುಂದಿನ ದಿನಗಳಲ್ಲಿ ಯಾರು ಸರಿ, ತಪ್ಪು ಅಂತ ಜನ ಪಾಠ ಕಲಿಸ್ತಾರೆ ಎಂದು ಹರಿಹಾಯ್ದರು.