ಯಡಿಯೂರಪ್ಪ ಆಶೀರ್ವಾದ ಪಡೆದ ನಿಖಿಲ್‌

0
10

ಬೆಂಗಳೂರು: ಬಿಜೆಪಿ ನೇತೃತ್ವದ ಎನ್​ಡಿಎಗೆ ಜೆಡಿಎಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರನ್ನು ನಿಖಿಲ್‌ ಕುಮಾರಸ್ವಾಮಿ ಭೇಟಿಯಾಗಿ ಆಶೀರ್ವಾದ ಪಡೆದರು.
ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಧವಳಗಿರಿಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ‌ದರು‌. ಈ ಸಂದರ್ಭದಲ್ಲಿ ಜೆಡಿಎಸ್ ನಾಯಕ ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಪುತ್ರ ಸಿರೀಶ್ ಹಾಗೂ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಸೇರಿ ಹಲವರು ಉಪಸ್ಥಿತರಿದ್ದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ‘ಯಡಿಯೂರಪ್ಪ ಅವರ ಆಶೀರ್ವಾದ ಪಡೆಯಲು ಬಂದಿದ್ದೆ”. “ನಿಮಗೆ ತಿಳಿದಿರುವ ಹಾಗೆ ಜೆಡಿಎಸ್ ಈಗ ಬಿಜೆಪಿ ಮತ್ತು ಎನ್‌ಡಿಎ ಮೈತ್ರಿಕೂಟದ ಭಾಗವಾಗಿದೆ. ಯಡಿಯೂರಪ್ಪ ರಾಜ್ಯದ ಹಿರಿಯ ನಾಯಕರಾಗಿದ್ದು, ಅವರ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೆ. ಅವರು ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದಾರೆ” ಎಂದರು.

Previous articleಫೈನಲ್‌ಗೆ ಭಾರತ, ಶ್ರೀಲಂಕಾ ಲಗ್ಗೆ
Next articleಕರ್ನಾಟಕವನ್ನು ಕುಡುಕರ ತೋಟ ಮಾಡಲಿದೆ ಸರಕಾರ