Home ತಾಜಾ ಸುದ್ದಿ ಯತ್ನಾಳ್‌ ವಿರುದ್ಧ ನಕಲಿ ಮತದಾನದ ದೂರು

ಯತ್ನಾಳ್‌ ವಿರುದ್ಧ ನಕಲಿ ಮತದಾನದ ದೂರು

0

ವಿಜಯಪುರ: ಚುನಾವಣೆಯಲ್ಲಿ ನಕಲಿ ಮತದಾನ ಮಾಡಿಸಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ದೂರು ನೀಡಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ ಯತ್ನಾಳ ವಿರುದ್ಧ ಸೋತಿರುವ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರಫ್ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಯವರಿಗೆ ದೂರು ನೀಡಿದ್ದಾರೆ. ಯತ್ನಾಳ್‌ ಅವರೇ ಅಧ್ಯಕ್ಷರಾಗಿರುವ ಸಿದ್ಧಸಿರಿ ಸಂಸ್ಥೆಯ ಬ್ಯಾಂಕ್‌ ಮತ್ತು ಸಕ್ಕರೆ ಕಾರ್ಖಾನೆ ಸಿಬ್ಬಂದಿ ಹೆಸರಲ್ಲಿ ನಕಲಿ ಮತದಾನ ಮಾಡಿಸಿದ್ದಾರೆ ಎಂದು ಆರೋಪಿಸಿರುವ ಅವರು, ಸಿಐಡಿ ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

Exit mobile version