Home ತಾಜಾ ಸುದ್ದಿ ಯಾವುದೇ ಕ್ಷಣದಲ್ಲಿ ಕರ್ನಾಟಕ ಚುನಾವಣೆ ಘೋಷಣೆ

ಯಾವುದೇ ಕ್ಷಣದಲ್ಲಿ ಕರ್ನಾಟಕ ಚುನಾವಣೆ ಘೋಷಣೆ

0

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆಯು ಏಪ್ರಿಲ್‌ – ಮೇ ತಿಂಗಳಲ್ಲಿ ನಡೆಯಬೇಕಾಗಿದೆ. ಭಾರತದ ಚುನಾವಣಾ ಆಯೋಗವು ಯಾವುದೇ ಕ್ಷಣದಲ್ಲಿ ಕರ್ನಾಟಕ ವಿಧಾನಸಭೆಯ ಚುನಾವಣೆಯನ್ನು ಘೋಷಿಸಬಹುದು. ಅದಕ್ಕೂ ಮೊದಲೇ ಪೂರ್ಣಗೊಳಿಸಬೇಕಾದ ಹಲವು ಚಟುವಟಿಕೆಗಳು ಇವೆ. ಅವುಗಳನ್ನೆಲ್ಲ ತುರ್ತಾಗಿ ಪೂರ್ಣಗೊಳಿಸಬೇಕು. ಆದ್ದರಿಂದ, ಜಾರಿಗೊಳಿಸಬೇಕಾದ ಮಾದರಿ ನೀತಿ ಸಂಹಿತೆಯ ಪ್ರತಿಯನ್ನು ಕಳುಹಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಎಲ್ಲ ಜಿಲ್ಲಾ ಚುನಾವಣಾ ಅಧಿಕಾರಿಗಳು ಚುನಾವಣೆ ಘೋಷಣೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವುದು ಎಂಬ ಸೂಚನೆ ನಿನ್ನೆ ರವಾನೆಯಾದ ಈ ಸಂದೇಶದಲ್ಲಿದೆ. ಈಗಾಗಲೇ ಒಂದು ಹಂತದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಚುನಾವಣಾ ಪೂರ್ವ ತಯಾರಿಗಳನ್ನು ಮಾಡಲಾಗುತ್ತಿದೆ.

Exit mobile version