ಯುಗಾದಿಗೆ ಕೈ ಮೊದಲ ಪಟ್ಟಿ

0
14
M B Patil

ವಿಜಯಪುರ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಯುಗಾದಿಗೆ ಬಿಡುಗಡೆ ಮಾಡಲಾಗುವುದು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ ಹೇಳಿದ್ದಾರೆ.
ವಿಜಯಪುರದಲ್ಲಿ ಮಾತನಾಡಿದ ಅವರು, ದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ
125 ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲಾಗಿದೆ ಎಂದರು. ಇನ್ನು ಸಿದ್ದರಾಮಯ್ಯನವರ ಕ್ಷೇತ್ರದ ವಿಚಾರವಾಗಿ ರಾಹುಲ್‌ ಮತ್ತು ಸಿದ್ದರಾಮಯ್ಯನವರ ನಡುವೆ ನಡೆದ ಮಾತುಕತೆ ಏನಾಗಿದೆ ಎನ್ನುವುದು ಗೊತ್ತಿಲ್ಲ. ಸಿದ್ದರಾಮಯ್ಯ ಬಾದಾಮಿ, ವರುಣಾ, ಕೋಲಾರ ಎಲ್ಲಿಯೇ ಸ್ಪರ್ಧಿಸಿದರೂ 40 ಸಾವಿರ ಅಂತರದ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

Previous articleನಾವು ಬಿಜೆಪಿ ಬಂಡುಕೋರರಲ್ಲ, ಬಿಜೆಪಿಯಲ್ಲಿದ್ದು ಟಿಕೆಟ್ ಕೇಳುತ್ತಿದ್ದೇವೆ
Next articleಮದರಸಾ ಶಾಲೆಗಳನ್ನು ಬಂದ್ ಮಾಡುವುದು ಅಸಾಧ್ಯ