ಹುಬ್ಬಳ್ಳಿ: ಕೆಎಸ್‌ಆರ್‌ಟಿಸಿ ಡ್ರೈವರ್ ಮಗ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಾಧನೆ ಮಾಡಿದ್ದಾನೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಯುವಕ 589 ರ್ಯಾಂಕ್ ಪಡೆದು ಪರೀಕ್ಷೆಯಲ್ಲಿ ಪಾಸ್ ಆಗಿದ್ದಾನೆ. ಸಿದ್ದಲಿಂಗಪ್ಪ ಕೆ ಪೂಜಾರ್ ಯುಪಿಎಸ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣನಾಗಿದ್ದಾನೆ. ಮೂಲತಃ ಕನ್ನಡ ಮಾಧ್ಯಮದಲ್ಲಿ ಓದಿರೋ ಸಿದ್ದಲಿಂಗಪ್ಪ ಬಡತನದಲ್ಲಿ ಓದಿ ದೇಶದ ಅತ್ಯುನ್ನತ ಪರೀಕ್ಷೆ ಪಾಸ್ ಮಾಡಿದ್ದಾನೆ.