Home ತಾಜಾ ಸುದ್ದಿ ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

0
ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ -ಬಿಜೆಪಿ  ಮೈತ್ರಿ  ನಿಖಿಲ್ ಕುಮಾರಸ್ವಾಮಿ ಅವರು  ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ… ಎಂದು ಬರೆದಿದ್ದಾರೆ.