ಅನ್ನಭಾಗ್ಯ ಯೋಜನೆ ತಡೆಯಲು ದುರದ್ದೇಶಪೂರ್ವಕವಾಗಿಯೇ ಅಕ್ಕಿಯನ್ನು ನೀಡುತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಚಿವ ಈಶ್ವರ್ ಖಂಡ್ರೆ ವಾಗ್ದಾಳಿ ನಡೆಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭಾರತದ ಆಹಾರ ನಿಗಮದ ಉಗ್ರಾಣಗಳಲ್ಲಿ ಅಕ್ಕಿಯ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದೆ. ಆದರೆ, ಯಥಿನಾಲ್ ಉತ್ಪಾದನೆಗೆ ಅಕ್ಕಿ ಪೂರೈಸುವ ಕೇಂದ್ರ ಸರ್ಕಾರ ಬಡವರಿಗೆ ಕೊಡಲು ನಿರಾಕರಿಸುತ್ತಿದೆ. ಕೇಂದ್ರ ಸರ್ಕಾರ ಯೋಜನೆ ತಡೆಯಲು ಏನೇ ಪ್ರಯತ್ನ ಮಾಡಿದರೂ ನಾವು ಯೋಜನೆ ಜಾರಿ ಮಾಡುತ್ತೇವೆ. ಬೇರೆ ರಾಜ್ಯಗಳಿಂದ ಅಕ್ಕಿ ತಂದು ಜನರಿಗೆ ನೀಡುತ್ತೇವೆ ಎಂದರು.