ರಂಗ್‌ದೇ ಬರ್ಸಾ ಡಿಜೆ ಪಾರ್ಟಿ ವೇಳೆ ದಾಳಿ

0
19

ಮಂಗಳೂರು : ಮಂಗಳೂರು ನಗರದ ಮರೋಳಿ ಎಂಬಲ್ಲಿ ರಂಗ್ ದೇ ಬರ್ಸಾ ಹೆಸರಿನಲ್ಲಿ ನಡೆಯುತ್ತಿದ್ದ ಹೋಲಿ ಆಚರಣೆಯಲ್ಲಿ ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದರು. ಈ ವೇಳೆ ಸಂಭ್ರಮದ ಡಿಜೆ ಪಾರ್ಟಿಗೆ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿ ವಸ್ತುಗಳಿಗೆ ಹಾನಿ ಮಾಡಿ ಬ್ಯಾನರ್ ಹರಿದು ದಾಂಧಲೆ ನಡೆಸಿದ ಘಟನೆ ನಡೆದಿದೆ. ಆಚರಣೆಯಲ್ಲಿ ಡಿಜೆ ಪಾರ್ಟಿ ಜೊತೆಗೆ ಬಣ್ಣ ಎರಚಿ ಯುವಕ-ಯುವತಿಯರು ಸಂಭ್ರಮಿಸುತ್ತಿದ್ದರು. ಅಶ್ಲೀಲ ವರ್ತನೆ ಆರೋಪಿಸಿ ಹೋಲಿ ಸಂಭ್ರಮಕ್ಕೆ ಭಜರಂಗದಳ ದಾಳಿ ನಡೆಸಿದೆ. ಅನ್ಯಕೋಮಿನ ಯುವಕರ ಜೊತೆ ಹೋಲಿ ಆಚರಣೆ ಅಂತ ಆರೋಪಿಸಿ ದಾಳಿ ನಡೆಸಲಾಗಿದ್ದು, ನಗರದ ವಿವಿಧ ಕಾಲೇಜಿನ ವಿದ್ಯಾರ್ಥಿಗಳು ಭಾಗಿಯಾಗಿದ್ದರು ಎನ್ನಲಾಗಿದೆ. ಹೋಲಿ ಸಂಭ್ರಮದ ಬ್ಯಾನರ್ ಹರಿದು ಹಾಕಿ ವಸ್ತುಗಳನ್ನ ಪುಡಿಗೈದು ದಾಂಧಲೆ ನಡೆಸಿದ್ದು, ಈ ವೇಳೆ ಭಜರಂಗದಳ ಕಾರ್ಯಕರ್ತರು ಮತ್ತು ಆಯೋಜಕರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಆಯೋಜಕರು ಮತ್ತು ಕೆಲವರ ಮೇಲೆ ಹಲ್ಲೆಗೂ ಯತ್ನಿಸಿದ ಭಜರಂಗದಳದ ಕಾರ್ಯಕರ್ತರು ಕಾರ್ಯಕ್ರಮದ ಬಳಿ ದಾಂಧಲೆ ನಡೆಸಿದ್ದಾರೆ. ಧ್ವನಿ ವರ್ಧಕ ಸೇರಿ ಹಲವು ವಸ್ತುಗಳಿಗೆ ಹಾನಿ ಎಸಗಿರೋದಾಗಿ ಆರೋಪಿಸಲಾಗಿದೆ. ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಭಜರಂಗದಳ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

Previous article‘ಅನರ್ಹ ಸಂಸದ’ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡ ರಾಹುಲ್
Next articleಆದಿ ಜಗದ್ಗುರು ಪಂಚಾಚಾರ್ಯ ಪಾಠಶಾಲೆ ಅಭಿವೃದ್ಧಿಗೆ ಬೆಂಬಲ