ಶ್ರೀರಂಗಪಟ್ಟಣ: ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಸಮೀಪ ಶನಿವಾರ ಸಂತೆ ತೆರೆಯಲು ವ್ಯಾಪಾರಸ್ಥರಿಗೆ ಅವಕಾಶ ಕಲ್ಪಿಸಲಾಗಿದೆ.
ಆದಾಗ್ಯೂ ವಾಪಾರಸ್ಥರು ಸಂತೆಯಲ್ಲಿನ ನಿಗಧಿತ ಜಾಗವನ್ನು ಬಿಟ್ಟು ಹೊರಗಡೆ ರಸ್ತೆಯ ಎರಡೂ ಬದಿಗಳಲ್ಲಿ ತರಕಾರಿ, ದಿನಸಿ ಅಂಗಡಿಗಳನ್ನು ತೆರೆಯುತ್ತಿದ್ದಾರೆ. ಇದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಪುರಸಭೆ ಎದುರು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತೀ ಶನಿವಾರದ ಸಂತೆಯಲ್ಲಿ ರಸ್ತೆ ಬದಿಯಲ್ಲಿನ ವ್ಯಾಪಾರಸ್ಥರನ್ನು ತೆರವುಗೊಳಿಸಿ ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕದು ಆಗ್ರಹಿಸಿ ಪುರಸಭೆ ಸದಸ್ಯ ಎಂ.ಎಲ್.ದಿನೇಶ್ ಹಾಗೂ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
