ರಾಜೀನಾಮೆ ನೀಡಲ್ಲ ಎಂದ ಸಿಎಂ

0
13

ಮಣಿಪುರ: ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ” ಎಂದು ಬರೆದುಕೊಂಡಿದ್ದಾರೆ.

ಕಳೆದ 58 ದಿನಗಳಿಂದ ಹಿಂಸಾಚಾರದ ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿರುವ ಮಣಿಪುರದಲ್ಲಿ ಹಿಂಸಾಚಾರ ನಿಲ್ಲದಿದ್ದರೆ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ರಾಜೀನಾಮೆ ನೀಡುವಂತೆ ಎಲ್ಲಾ ವಿರೋಧ ಪಕ್ಷಗಳು ಒತ್ತಡ ಹೇರಿದ್ದವು.

Previous articleನೂತನ ತರಬೇತಿ ವಾಹನಗಳಿಗೆ ಚಾಲನೆ
Next articleಸ್ವಯಂಘೋಷಿತ ಆರ್ಥಿಕ ತಜ್ಞರೇ 15Kg ಅಕ್ಕಿ ಯಾವಾಗ ಕೊಡ್ತೀರಿ?