ಬೆಂಗಳೂರು: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ಮತದಾರರ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ. ಒಟ್ಟು 224 ವಿಧಾನಸಭೆ ಕ್ಷೇತ್ರಗಳಲ್ಲಿ ಒಟ್ಟು 5,30,80,639 ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ ಎಂದು ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಪತ್ರಿಕೋಗೋಷ್ಠಿಯಲ್ಲಿ ಮಾತನಾಡಿದ ಅವರು, 2,66,82,156 ಪುರುಷ ಮತದಾರರು ಹಾಗೂ 2,63,98,483 ಮಹಿಳಾ ಮತದಾರಿದ್ದಾರೆ. ಈ ಪೈಕಿ 6,45,140 ಮಂದಿ ಯುವಕರು ಹಾಗೂ 5,26,237 ಯುವತಿಯರು ಈ ಬಾರಿ ಮೊದಲ ಬಾರಿಗೆ ಮತ ಚಲಾಯಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.