Home ತಾಜಾ ಸುದ್ದಿ ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ: ಬೊಮ್ಮಾಯಿ

ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ: ಬೊಮ್ಮಾಯಿ

0
ಶೋಕಾಚರಣೆ

ಬೆಳಗಾವಿ: ಸಚಿವ ಉಮೇಶ ಕತ್ತಿ ವಿಧಿವಶರಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೂರು ದಿನಗಳ ಶೋಕಾಚರಣೆ ಘೋಷಿಸಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, ರಾಜ್ಯಾದ್ಯಂತ ಮೂರು ದಿನ ಸರ್ಕಾರದಿಂದ ಶೋಕಾಚರಣೆ ಮಾಡಲು ತೀರ್ಮಾನಿಸಲಾಗಿದೆ. ದೊಡ್ಡಬಳ್ಳಾಪುರದಲ್ಲಿ ನಡೆಯುವ ಜನೋತ್ಸವ ಕಾರ್ಯಕ್ರಮವನ್ನು ಸೆ. 11 ಮುಂದೂಡಲಾಗಿದೆ ಎಂದು ತಿಳಿಸಿದರು.

Exit mobile version