Home ತಾಜಾ ಸುದ್ದಿ ರಾಜ್ಯಾದ್ಯಂತ ಒತ್ತುವರಿ ತೆರವು: ಭೈರತಿ ಬಸವರಾಜ

ರಾಜ್ಯಾದ್ಯಂತ ಒತ್ತುವರಿ ತೆರವು: ಭೈರತಿ ಬಸವರಾಜ

0
ಭೈರತಿ ಬಸವರಾಜ

ರಾಜ್ಯಾದ್ಯಂತ ಒತ್ತುವರಿಯಾಗಿರುವ ರಾಜಕಾಲುವೆ, ಕೆರೆ, ಸರ್ಕಾರಿ ಜಾಗಗಳ ಒತ್ತುವರಿಯನ್ನು ತೆರವು ಮಾಡಲಾಗುವುದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒತ್ತುವರಿ ತೆರವು ಕಾರ್ಯದಲ್ಲಿ ಶ್ರೀಮಂತ-ಬಡವನೆಂಬ ಯಾವುದೇ ತಾರತಮ್ಯ ಇಲ್ಲ ಮಾಡದೆ ಯಾವುದೇ ಮುಲಜಿಲ್ಲದೆ ತೆರವು ಕಾರ್ಯ ನಡೆಸಲಾಗುವುದು ಎಂದರು. ಇನ್ನು 11 ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರನ್ನು ಈಗಾಗಲೇ ಖಾಯಂ ಗೊಳಿಸಲಾಗಿದೆ. ಹಂತ ಹಂತವಾಗಿ ಇನ್ನುಳಿದ ಪೌರ ಕಾರ್ಮಿಕರನ್ನು ಖಾಯಂ ಗೊಳಿಸಲಾಗುವುದು ಎಂದು ಅವರು ತಿಳಿಸಿದರು.

Exit mobile version