ರಾಜ್ಯ ಶಿಕ್ಷಣ ನೀತಿ ಆಯೋಗದ ಅಧ್ಯಕ್ಷರಾಗಿ ಸುಖ್‌ದೇವ್

0
19

ಬೆಂಗಳೂರು: ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಶಿಕ್ಷಣ ನೀತಿಯ ಕರಡು ಸಿದ್ಧಪಡಿಸಲು ಪ್ರೊ|| ಸುಖ್‌ದೇವ್ ಥೋರಟ್ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಶಿಕ್ಷಣ ನೀತಿ ಸಮಿತಿಯನ್ನು ರಚಿಸಿ ಆದೇಶಿಸಿ ಸುತ್ತೋಲೆ ಹೊರಡಿಸಿದ್ದಾರೆ.
ಸಮಿತಿಯ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಸಮಿತಿಯು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕತೆ, ವೈಚಾರಿಕತೆ ಬೆಳೆಸುವ ಮತ್ತು ಅವರ ಮನೋವಿಕಾಸಕ್ಕೆ ಅಗತ್ಯವಾದ ಶಿಕ್ಷಣ ನೀಡಲು ಸೂಕ್ತ ಶಿಫಾರಸುಗಳನ್ನು ನೀಡಲಿದೆ ಎಂಬ ಭರವಸೆಯಿದೆ. ಕರ್ನಾಟಕ ರಾಜ್ಯ ಶಿಕ್ಷಣ ನೀತಿಯು ದೇಶಕ್ಕೆ ಮಾದರಿ ಶಿಕ್ಷಣ ನೀತಿಯಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

Previous articleಶಾಸಕರ ಸಮಯ ಪ್ರಜ್ಞೆ ತಪ್ಪಿದ ಧಾರ್ಮಿಕ ಸಂಘರ್ಷ
Next articleಅಂದು ಸೋತಿದ್ದೆ… ಇಂದು ಉದ್ಘಾಟಿಸಿದೆ…