Home News ರಾಮನಗರದಲ್ಲಿ ಮಂಜುನಾಥ್​ ಮುನ್ನಡೆ

ರಾಮನಗರದಲ್ಲಿ ಮಂಜುನಾಥ್​ ಮುನ್ನಡೆ

ಬೆಂಗಳೂರು: ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ, ಕಾಂಗ್ರೆಸ್ VS ಬಿಜೆಪಿ ನೇರವಾಗಿ ಹಣಾಹಣಿ ನಡೆದಿದೆ.
ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ಸತತ 4ನೇ ಗೆಲುವಿನ ನಿರೀಕ್ಷೆಯಲ್ಲಿದ್ದರೆ, ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್​ ಮುನ್ನಡೆ ಸಾಧಿಸಿದ್ದಾರೆ. ಹಳೇ ಬೆಂಗಳೂರು ಮೈಸೂರು ಹೆದ್ದಾರಿಯ ಪಕ್ಕದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಹಾಗೂ ಮೈತ್ರಿ ಅಭ್ಯರ್ಥಿ ಡಾ. ಸಿ.ಎನ್. ಮಂಜುನಾಥ್ ನಡುವೆ ಸ್ಪರ್ಧೆ ಏರ್ಪಟಿದೆ. ಒಕ್ಕಲಿಗ ಸಮುದಾಯದ ದೇವೇಗೌಡ ಮತ್ತು ಡಿ ಕೆ ಶಿವಕುಮಾರ್ ಅವರ ಕುಟುಂಬಕ್ಕೂ ಈ ಚುನಾವಣೆ ಪ್ರತಿಷ್ಠೆಯಾಗಿದೆ. ಈ ಎರಡು ಕುಟುಂಬದ ಸದಸ್ಯರು ರಾಜಕೀಯ ಅಖಾಡದಲ್ಲಿ ಮತ್ತೆ ಎದುರಾಗಿದ್ದು, ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

Exit mobile version