Home ತಾಜಾ ಸುದ್ದಿ ರಾಷ್ಟ್ರದ ಬೆಳವಣಿಗೆಗೆ 9 ವರ್ಷಗಳ ಅಚಲ ಸಮರ್ಪಣೆ

ರಾಷ್ಟ್ರದ ಬೆಳವಣಿಗೆಗೆ 9 ವರ್ಷಗಳ ಅಚಲ ಸಮರ್ಪಣೆ

0

ನವದೆಹಲಿ: ಭಾರತದ ಪ್ರಧಾನಿಯಾಗಿ 9 ವರ್ಷಗಳ ಅವಧಿಯನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ ಸಾಮಜಿಕ ಜಾಲತಾಂದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಂತಸ ಹಂಚಿಕೊಂಡಿದ್ದಾರೆ. ಅವರು ತಮ್ಮ ಟ್ವೀಟ್‌ನಲ್ಲಿ ದೇಶದ ಸೇವೆಯಲ್ಲಿ ನಾವಿಂದು 9 ವರ್ಷಗಳನ್ನು ಪೂರೈಸಿರುತ್ತಿರುವ ಈ ಸಂದರ್ಭದಲ್ಲಿ ನನ್ನ ಹೃದಯ ನಮ್ರತೆ ಮತ್ತು ಕೃತಜ್ಞತೆಯಿಂದ ತುಂಬಿದೆ. ನಾವು ಮಾಡಿದ ಪ್ರತಿಯೊಂದು ನಿರ್ಧಾರ, ಪ್ರತಿಯೊಂದು ಕ್ರಮ ಜನರ ಜೀವನವನ್ನು ಸುಧಾರಿಸುವ ಉದ್ದೇಶವಾಗಿತ್ತು. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸಲು ನಾವು ಇನ್ನೂ ಹೆಚ್ಚು ಶ್ರಮಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನರೇಂದ್ರ ಮೋದಿ ಅವರು 2014ರ ಮೇ 26ರಂದು ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎರಡನೇ ಅವಧಿಗೆ 2019ರ ಮೇ 30ರಂದು ಪ್ರಮಾಣ ವಚನ ಸ್ವೀಕರಿಸಿದ್ದರು, ಕೇಂದ್ರದಲ್ಲಿ ಮೋದಿ ಸರ್ಕಾರ 9 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

Exit mobile version