ರಾಷ್ಟ್ರಪತಿ ಭವನಕ್ಕೆ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್‌ ವಶಕ್ಕೆ

0
14
New Delhi

ನವದೆಹಲಿ: ಅದಾನಿ-ಹಿಂಡೆನ್‌ಬರ್ಗ್‌ ವಿವಾದ ಕುರಿತು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ರಚಿಸುವಂತೆ ಒತ್ತಾಯಿಸಿ ಪ್ರತಿಪಕ್ಷಗಳು ದೆಹಲಿಯ ವಿಜಯ್‌ ಚೌಕ್‌ನಿಂದ ರಾಷ್ಟ್ರಪತಿ ಭವನದತ್ತ ಪ್ರತಿಭಟನಾ ಮೆರವಣಿಗೆ ಆರಂಭಿಸಿದ್ದು, ಈ ವೇಳೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಅದಾನಿ ಸಮೂಹದ ಕಂಪನಿಗಳ ಭ್ರಷ್ಟಾಚಾರ ಮತ್ತು ಆರ್ಥಿಕ ದುರುಪಯೋಗದ ಆರೋಪ ಜತೆಗೆ 2019ರ ಮಾನಹಾನಿ ಪ್ರಕರಣದಲ್ಲಿ ರಾಹುಲ್‌ ಗಾಂಧಿ ಅವರಿಗೆ ಜೈಲು ಶಿಕ್ಷೆ ವಿಧಿಸಿರುವುದನ್ನು ಖಂಡಿಸಿರುವ ಪ್ರತಿಪಕ್ಷಗಳು, ಅದಾನಿ ಹಗರಣ ಮುಚ್ಚಿ ಹಾಕಲು ಮತ್ತು ಜನರ ಗಮನ ಬೇರೆಡೆ ಸೆಳೆಯಲು ಇದು ಪ್ರಧಾನಿ ಮೋದಿ ಅವರ ತಂತ್ರವಾಗಿದೆ ಎಂದು ಆರೋಪಿಸಿದ್ದಾರೆ.
ಪ್ರತಿಪಕ್ಷಗಳು ಪ್ರತಿಭಟನಾ ಮೆರವಣಿಗೆ ಆರಂಭಿಸುತ್ತಿದ್ದಂತೆಯೇ ಪೊಲೀಸರು ನಾಯಕರನ್ನು ವಶಕ್ಕೆ ಪಡೆದುಕೊಂಡರು. ಬಳಿಕ ಬಸ್‌ನಲ್ಲಿ ಕೂರಿಸಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಪ್ರತಿಭಟನಾ ಮೆರವಣಿಗೆ ಅನುಮತಿ ಪಡೆಯಲಾಗಿರಲಿಲ್ಲ. ಅಲ್ಲದೆ, ಭೇಟಿಗೆ ರಾಷ್ಟ್ರಪತಿಗಳೂ ಕೂಡ ಸಮಯ ನೀಡಿರಲಿಲ್ಲ ಎಂದು ತಿಳಿದುಬಂದಿದೆ.

Previous articleಮನೆಯಲ್ಲಿ ವರುಣಾದಿಂದ ಸ್ಪರ್ಧಿಸುವಂತೆ ಹೇಳಿದ್ದಾರೆ
Next articleಮನೆ ಮನೆಯಲ್ಲೂ ಡ್ರಗ್ಸ್ ವಿರುದ್ಧ ಅಭಿಯಾನ ಶುರುವಾಗಲಿ