ದಾವಣಗೆರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತೋರಿಕೆಗಾಗಿ ಲಿಂಗಾಯತ ಮಠಕ್ಕೆ ಹೋಗುತ್ತಿರುವುದಕ್ಕೆ ಧನ್ಯವಾದಗಳನ್ನು ಹೇಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಸೃತಿ ಇರಾನಿ, ಸೇರಿದಂತೆ ಹಲವು ನಾಯಕರು ತಾರಾ ಪ್ರಚಾರಕರಾಗಿ ಆಗಮಿಸುತ್ತಿದ್ದಾರೆ ಎಂದರು.
ಸಿಎಂ ಆಗಬೇಕು ಎಂದು ನಾನು ಅಂದುಕೊಂಡಿರಲಿಲ್ಲ. ಹಿಂದೆಯೂ ಹೈಕಮಾಂಡ್ ತೀರ್ಮಾನ ಮಾಡಿದ್ದು, ಈಗಲೂ ಕೂಡ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು.
ಭಾವನೆಗಳ ಜೊತೆ ಬಿಜೆಪಿ ಆಟವಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಲಿಂಗಾಯತ ವಿವಾದಗಳನ್ನು ತೆಗೆದಿದ್ದೇ ಅವರು. ಡಿಕೆಶಿ ಹೇಳುವುದು ಒಂದು ಮಾಡೋದು ಒಂದು. ದೇವರು ಯಾರಿಗೆ ಆಶೀರ್ವಾದ ಮಾಡ್ತಾರೆ ಎಂದು ಕಾದು ನೋಡೋಣ ಎಂದು ತಿಳಿಸಿದರು.


























