ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ: ‘ಇಂಡಿಯಾ’ ಮೈತ್ರಿಕೂಟ ಸಂಭ್ರಮಾಚರಣೆ

0
22

ದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಇಂದು ಮರುಸ್ಥಾಪಿಸಲಾಗಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ INDIA ಒಕ್ಕೂಟದ ನಾಯಕರಿಗೆ ಸಿಹಿ ತಿನ್ನಿಸುವ ಮೂಲಕ ಸಂಭ್ರಮ ಹಂಚಿಕೊಂಡಿದ್ದಾರೆ.
ʻಇಂಡಿಯಾ’ ಮೈತ್ರಿಕೂಟದ ವಿರೋಧ ಪಕ್ಷದ ನಾಯಕರು ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವವನ್ನು ಮರುಸ್ಥಾಪನೆ ಮಾಡಿರುವುದನ್ನು ಶ್ಲಾಘಿಸಿದ್ದಾರೆ, ಇದು “ಸತ್ಯದ ವಿಜಯ” ಎಂದು ಬಣ್ಣಿಸಿದ್ದಾರೆ.
ಈ ಕುರಿತು ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ಗಾಂಧಿ ಅವರನ್ನು ಸಂಸದರಾಗಿ ಮರುಸ್ಥಾಪಿಸುವ ನಿರ್ಧಾರ ಸ್ವಾಗತಾರ್ಹ. ಇನ್ನಾದರೂ ಬಿಜೆಪಿ ಮತ್ತು ಮೋದಿ ಸರ್ಕಾರ ತಮ್ಮ ಉಳಿದ ಅವಧಿಯಲ್ಲಿ ವಿಪಕ್ಷ ನಾಯಕರನ್ನ ಗುರಿಯಾಗಿಸುವ ಮೂಲಕ ಪ್ರಜಾಪ್ರಭುತ್ವ ಅವಮಾನಿಸುವ ಬದಲು ನಿಜವಾದ ಆಡಳಿತದ ಮೇಲೆ ಕೇಂದ್ರೀಕರಿಸಬೇಕು ಎಂದು ತಿರುಗೇಟು ನೀಡಿದ್ದಾರೆ.

Previous articleಸ್ಪಂದನಾ ನಿಧನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸಂತಾಪ
Next articleಕಾವೇರಿ ನೀರು ಹಂಚಿಕೆ: ರಾಜ್ಯದ ಹಿತ ಗಮನದಲ್ಲಿಟ್ಟುಕೊಂಡು ತೀರ್ಮಾನ