ರಾಹುಲ್, ಪ್ರಿಯಾಂಕಾ ಗಾಂಧಿ ಪ್ರಚಾರಕ್ಕೆ ಬಂದಷ್ಟು ನಮಗೆ ಲಾಭ

0
15
Karnataka CM
Karnataka CM Basavaraj

ಬೆಳಗಾವಿ(ಯಮಕನಮರಡಿ): ಪ್ರಧಾನಿ ನರೇಂದ್ರ ಮೋದಿಯವರು, ಅಮಿತ್ ಶಾ ಅವರು ಯಾಕೆ ಬರುತ್ತಿದ್ದಾರೆ ಅಂತ ಕಾಂಗ್ರೆಸ್ ನವರು ಕೇಳುತ್ತಾರೆ. ಆದರೆ, ರಾಹುಲ್, ಪ್ರಿಯಾಂಕಾ ಇಲ್ಲಿ ಬಂದಿದ್ದಾರೆ. ರಾಹುಲ್, ಪ್ರಿಯಾಂಕಾ ಬಂದಷ್ಟು ನಮಗೆ ಅನುಕೂಲ. ಅವರು ಹೋದಲ್ಲಿ ಕಾಂಗ್ರೆಸ್ ಸೋತಿದೆ. ಅವರು ಬಂದಷ್ಟು ನಮಗೆ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಹೇಳಿದರು.
ಇಂದು ಯಮಕನಮರಡಿ ಕ್ಷೇತ್ರದಲ್ಲಿ ಅಭ್ಯರ್ಥಿ ಬಸವರಾಜ ಹಂದ್ರಿ ಪರ ಪ್ರಚಾರ ನಡೆಸಿದ ಬಳಿಕ ಅವರು ಮಾತನಾಡಿದರು.
ಈ ಬಾರಿ ಚುನಾವಣೆ ಐತಿಹಾಸಿಕವಾಗಿದೆ. ನಮ್ಮ ನೆಚ್ಚಿನ ಪ್ರಧಾನಿ ಮೋದಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ದೇಶದ ಅಭಿವೃದ್ದಿ ಮಾಡುತ್ತಿದ್ದಾರೆ. ಯಾರಿಗೆ ಕರ್ನಾಟಕದ ಅಭಿವೃದ್ಧಿ ಬೇಕಿದೆ ಅವರು ಡಬಲ್ ಎಂಜಿನ್ ಸರ್ಕಾರ ಬೆಂಬಲಿಸುತ್ತಾರೆ. ಡಬಲ್ ಎಂಜಿನ್ ಸರ್ಕಾರ ಬೇಡ ಅನ್ನುವವರು ಕಾಂಗ್ರೆಸ್ ಗೆ ಮತ ಹಾಕಲಿ. ಡಬಲ್ ಎಂಜಿನ್ ಸರ್ಕಾರ ಇರುವುದರಿಂದ ರಾಜ್ಯದಲ್ಲಿ 60 ಸಾವಿರ ಕೋಟಿ ರೂ. ವೆಚ್ಚದಲ್ಲಿ 6000 ಕಿ.ಮೀ ರಸ್ತೆ ನಿರ್ಮಾಣ ಮಾಡಲಾಗಿದೆ. ಬೆಳಗಾವಿ ಕುಡಚಿ ರೈಲ್ವೆ ಲೈನ್ ಡಬಲ್ ಮಾಡಲಾಗುತ್ತಿದೆ. ಕಿಸಾನ್ ಸಮ್ಮಾನ್ ಯೋಜನೆ ಎಲ್ಲವೂ ಡಬಲ್ ಎಂಜಿನ್ ಸರ್ಕಾರದಿಂದ ಸಾಧ್ಯವಾಗಿದೆ ಎಂದರು.

Previous articleಕತ್ತಿ ಕುಟುಂಬದೊಂದಿಗೆ ಮೂರು ತಲೆಮಾರಿನ ಒಡನಾಟ
Next articleಕಾಂಗ್ರೆಸ್‌ನದ್ದು 85 ಪರ್ಸೆಂಟ್ ಭ್ರಷ್ಟಾಚಾರ ಸರ್ಕಾರ