ರೈತರು ಆತಂಕ ಪಡಬೇಕಿಲ್ಲ: ನೀರು ಕೊಡಿಸುವ ಜವಾಬ್ದಾರಿ‌ ನನ್ನದು

0
13

ಶ್ರೀರಂಗಪಟ್ಟಣ: ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ತಾಲೂಕಿನ ಕೆಆರ್‌ಎಸ್ ಕನ್ನಂಬಾಡಿ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದ್ದು, ಈ ಭಾಗದ ರೈತರು ಆತಂಕ ಪಡಬೇಕಾಗಿಲ್ಲ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ತಿಳಿಸಿದ್ದಾರೆ.

ತಾಲ್ಲೂಕಿನ ಚಿಕ್ಕಂಕನಹಳ್ಳಿ ಸೇರಿದಂತೆ ಅಕ್ಕ ಪಕ್ಕದ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,‌ ಜಿಲ್ಲೆಯ ಎಲ್ಲಾ ನಾಲೆಗಳಿಗೂ ಇನ್ನೂ ಎರಡು ಕಟ್ಟು ನೀರು ಕೊಡುವ ಮೂಲಕ ಈಗಾಗಲೇ ಬೆಳೆದಿರುವ ಬೆಳೆಗಳನ್ನು ರಕ್ಷಿಸಿಕೊಳ್ಳಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಇನ್ನು ದಸರಾ ಆಚರಣೆ ವಿಷಯವಾಗಿ ಮಾತನಾಡಿದ ಶಾಸಕ‌ ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ಜಿಲ್ಲಾಧಿಕಾರಿಗಳು ಹಾಗೂ ಮೈಸೂರು ದಸರಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅಂತಿಮ‌ ನಿರ್ಧಾರ ಕೈಗೊಳ್ಳಲಾಗುವುದು. ಕಾವೇರಿ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿಯ ಶ್ರೀರಂಗಪಟ್ಟಣ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಬೇಕೋ ಇಲ್ಲಾ ಸಾಂಪ್ರದಾಯಕವಾಗಿ ಆಚರಿಸಬೇಕೋ ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

Previous articleಅಕ್ರಮ ಇ-ಸ್ವತ್ತು: ಪಿಡಿಒ ಅಮಾನತು
Next articleಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಪುರಸಭೆ ಪ್ರಬಾರ ಅಧಿಕಾರಿ