ಶ್ರೀರಂಗಪಟ್ಟಣ: ರೈತರ ಕಾವೇರಿ ಹೋರಾಟಕ್ಕೆ ವಕೀಲರ ಸಂಘ ಸಾಥ್ ನೀಡಿದ್ದು, ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ನ್ಯಾಯಾಲಯದ ಕಲಾಪ ಭಹಿಷ್ಕರಿಸಿ ಪ್ರತಿಭಟನೆ ನಡೆಸಿದರು.
ವಕೀಲರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಕಾರ್ಯದರ್ಶಿ ಚಂದ್ರೇಗೌಡ, ಖಜಾಂಚಿ ವಿನಯ್ ಸೇರಿದಂತೆ ಪದಾಧಿಕಾರಿಗಳು ಹಾಗೂ ಹಿರಿಯ , ಕಿರಿಯ ಸದಸ್ಯರ ನೇತೃತ್ವದಲ್ಲಿ ಕಾವೇರಿ ಹೋರಾಟವನ್ನು ಬೆಂಬಲಿಸಿ ಪ್ರತಿಭಟಿಸಿದರು.
ಕಲಾಪ ಬಹಿಷ್ಕರಿಸಿ ನ್ಯಾಯಾಲಯದಿಂದ ತಾಲೂಕು ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಕೀಲರು, ಅಂಬೇಡ್ಕರ್ ವೃತ್ತದಲ್ಲಿ ಪ್ರತಿಮೆ ಸುತ್ತಲೂ ಮಾನವ ಸರಪಳಿ ನಿರ್ಮಿಸಿ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿದರು.
ಬಳಿಕ ತಾಲ್ಲೂಕು ಕಚೇರಿ ಎದುರು ಧರಣಿ ನಡೆಸಿ ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು
