ಮಧುರೈ: ಮಧುರೈ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿ 10 ಜನ ಸಜೀವ ದಹನವಾದ ಘಟನೆ ನಡೆದಿದೆ, ಇಂದು ಮುಂಜಾನೆ ನಿಂತಿದ್ದ ರೈಲು ಬೋಗಿಯಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇಂದು ಮುಂಜಾನೆ 5:15 ಕ್ಕೆ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಅರ್ಧ ಗಂಟೆಯ ನಂತರ 7:15 ರ ವೇಳೆಗೆ ಬೆಂಕಿಯನ್ನು ನಂದಿಸಿದ್ದಾರೆ ಎಂದು ದಕ್ಷಿಣ ರೈಲ್ವೆ ಪ್ರಕಟಣೆ ತಿಳಿಸಿದೆ. ” ನಾಗರ್ ಕೋಯಿಲ್ ಜಂಕ್ಷನ್ ನಲ್ಲಿ ರೈಲು ಸಂಖ್ಯೆ 16730 (ಪುನಲೂರ್-ಮಧುರೈ ಎಕ್ಸ್ಪ್ರೆ ಸ್) ಗೆ ಜೋಡಿಸಲಾಗಿತ್ತು. ಗಾಯಗೊಂಡಿರುವ ಜನರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.