Home ನಮ್ಮ ಜಿಲ್ಲೆ ಚಿಕ್ಕಮಗಳೂರು ರೈಲು ದುರಂತ: ಚಿಕ್ಕಮಗಳೂರಿನ 110 ಜನ ಸುರಕ್ಷಿತ

ರೈಲು ದುರಂತ: ಚಿಕ್ಕಮಗಳೂರಿನ 110 ಜನ ಸುರಕ್ಷಿತ

0

ಚಿಕ್ಕಮಗಳೂರು: ಒಡಿಶಾ ರಾಜ್ಯದಲ್ಲಿ ಸಂಭವಿಸಿದ ತ್ರಿವಳಿ ರೈಲು ದುರಂತದಲ್ಲಿ ಜಿಲ್ಲೆಯ 110 ಮಂದಿ ಪ್ರಯಾಣಿಸುತ್ತಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳಸ ತಾಲೂಕು ವ್ಯಾಪ್ತಿಯ ಕಳಸ, ಸಂಸೆ, ಹೊರನಾಡು ಸುತ್ತಮುತ್ತಲಿನ ಜೈನ ಸಮುದಾಯದ 110 ಮಂದಿ ಎರಡು ದಿನಗಳ ಹಿಂದೆ ಜಾರ್ಖಂಡ್‌ನ ಸುಮೇದ್ ಸಿಖರ್ಜಿ ಕ್ಷೇತ್ರಕ್ಕೆ ಹೊರಟಿದ್ದರು.
ಈ ರೈಲು ಕಳೆದ ರಾತ್ರಿ ಬಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಅಪಘಾತಕ್ಕೀಡಾಗಿದೆ. ಆದರೆ ಕಳಸ ತಾಲೂಕಿನಿಂದ ತೆರಳಿದ್ದ 110 ಮಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.
ಶಾಲಿಮರ್-ಚೆನ್ನೈ ಕೋರಮಂಡಲ ಎಕ್ಸ್‌ಪ್ರೆಸ್ ರೈಲಿನ 10ರಿಂದ 12 ಬೋಗಿಗಳು ಹಳಿತಪ್ಪಿ, ಎದುರಿನ ಹಳಿಗೆ ಬಿದ್ದು ದುರಂತ ಸಂಭವಿಸಿದೆ. ರಕ್ಷಣಾ ಕಾರ್ಯಾಚರಣೆಗೆ ಮುಂದುವರಿದಿದೆ.

Exit mobile version