ರೈಲು ದುರಂತ: ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು

ಒಡಿಶಾದ ಬಾಲಸೋರ್‌ನಲ್ಲಿ ನಡೆದ ಭೀಕರ ರೈಲು ಅಪಘಾತದ ಬಗ್ಗೆ ಕೇಂದ್ರೀಯ ತನಿಖಾ ದಳ(ಸಿಬಿಐ) ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಭುವನೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆಡಳಿತಾತ್ಮಕ ಮಾಹಿತಿಯನ್ನು ಪರಿಗಣಿಸಿ, ರೈಲ್ವೆ ಮಂಡಳಿಯು ಹೆಚ್ಚಿನ ತನಿಖೆಗಾಗಿ ಇಡೀ ಪ್ರಕರಣವನ್ನು ಸಿಬಿಐಗೆ ಶಿಫಾರಸು ಮಾಡಿದೆ” ಎಂದರು.
ಜೂನ್ 2ರ ರಾತ್ರಿ ಮೂರು ರೈಲುಗಳ ಮಧ್ಯೆ ಅಪಘಾತ ಸಂಭವಿಸಿ 290ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಭಾರತದ ರೈಲ್ವೆ ಇತಿಹಾಸದಲ್ಲೇ ಅತ್ಯಂತ ಘೋರ ಘಟನೆಗಳಲ್ಲಿ ಇದೂ ಒಂದು ಪರಿಗಣಿಸಲಾಗಿದೆ.