Home ತಾಜಾ ಸುದ್ದಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ

0

ಮೈಸೂರು: ಪಕ್ಷ ಸೂಚಿಸಿದರೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಇದುವರೆಗೂ ಎಲ್ಲಿಯೂ ಚರ್ಚೆ ನಡೆಸಿಲ್ಲ. ಪಕ್ಷ ಸೂಚಿಸಿದ್ರೆ ಆದೇಶ ಪಾಲಿಸಲು ಸಿದ್ಧ. ಆದರೆ, ಲೋಕಸಭೆ ಚುನಾವಣೆಗೆ ಇನ್ನು ಸಮಯವಿದೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು. ಒಂದು ವೇಳೆ ನಾನೇ ಸ್ಪರ್ಧೆ ಮಾಡಬೇಕೆಂದರೆ ಮಾಡುವೆ ಎಂದಿದ್ದಾರೆ.

Exit mobile version