ಲೋಕಸಭಾ ಚುನಾವಣೆ ಹಿನ್ನೆಲೆ ಆಯ್ಕೆ ವಿಳಂಬ

0
24
ಈಶ್ವರಪ್ಪ

ದಾವಣಗೆರೆ: ಮುಂದಿನ ಲೊಕಸಭಾ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಶೀಘ್ರದಲ್ಲೇ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಸಂಸದ ಜಿ.ಎಂ. ಸಿದ್ದೇಶ್ವರ್ ಅವರ ಹುಟ್ಟುಹಬ್ಬದ ಅಂಗವಾಗಿ ದಾವಣಗರೆಗೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭೆ ಮತ್ತು ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳನ್ನು ದೃಷ್ಠಿಯಲ್ಲಿಟ್ಟುಕೊಂಡೇ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರ ನೇಮಕ ಮಾಡಬೇಕಾಗಿರುವುದರಿಂದ ಆಯ್ಕೆ ಪ್ರಕ್ರಿಯೆಯಲ್ಲಿ ತಡವಾಗಿದೆ ಎಂದು ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಸರ್ಕಾರ ಮೂರು ತಿಂಗಳಲ್ಲೆ ಪತನವಾಗುತ್ತೆ. ಈ ಸರ್ಕಾರ ಬಹಳ ದಿನಗಳ ಕಾಲ ನಡೆಯುವುದಿಲ್ಲ. ಅವರ ಪಕ್ಷದ ಶಾಸಕರಿಗೆ ಸುಳ್ಳು ಹೇಳಿ ಅಧಿಕಾರಕ್ಕೆ ಬಂದೆವು ಎನ್ನುವುದು ಕಾಡುತ್ತಿದೆ. ಅಜಿತ್ ಪವಾರ್ ರೀತಿ ಇನ್ನೂ ಕೆಲವರು ಹೊರಬರುತ್ತಾರೆ ನೋಡುತ್ತಾ ಇರಿ, ಮಹಾರಾಷ್ಟçದಲ್ಲಿ ಆದಂತೆ ಇಲ್ಲಿ ಕೂಡ ಆಗಲಿದೆ. ಈ ಸರ್ಕಾರ ಕೇವಲ ಮೂರು ತಿಂಗಳು ಮಾತ್ರ ಅಧಿಕಾರದಲ್ಲಿ ಇರುತ್ತೆ, ಕಾದು ನೋಡಿ ರಾಜ್ಯದಲ್ಲಿ ಏನಾಗುತ್ತೆ ಎಂದು ಭವಿಷ್ಯ ನುಡಿದರು.

Previous articleಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧ
Next articleಬರಪೀಡಿತ ರಾಜ್ಯ ಘೋಷಣೆಗೆ ಮಾಜಿ ಸಿಎಂ ಯಡಿಯೂರಪ್ಪ ಒತ್ತಾಯ