ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಕಲ್ಲೆಸೆದ ಆರೋಪಿ ಬಂಧನ

0
17

ದಾವಣಗೆರೆ: ಇತ್ತೀಚೆಗೆ ‘ವಂದೇ ಭಾರತ್’ ಎಕ್ಸ್‌ಪ್ರೆಸ್‌ ಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಸಿಸಿ. ಟಿ ವಿ ಕ್ಯಾಮೆರಾ ದೃಶ್ಯಾವಳಿ ಆಧರಿಸಿ ರೈಲ್ವೇ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆಯ ವಿಜಯನಗರ ಬಡಾವಣೆಯ 13 ವರ್ಷದ ಬಾಲಕನನ್ನು ಬಂಧಿಸಿ ಬಾಲಮಂದಿರಕ್ಕೆ ಕಳಿಸಲಾಗಿದೆ‌.
ಕಳೆದ ಜು.27 ಕ್ಕೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಲಾಗಿತ್ತು. ಆದರೆ, ಜುಲೈ 1ರಂದು ಧಾರವಾಡದಿಂದ ಬೆಂಗಳೂರಿನತ್ತ ಹೊರಟಿದ್ದ ರೈಲಿಗೆ ಕಲ್ಲು ಎಸೆಯಲಾಗಿತ್ತು. ಇದರಿಂದ ರೈಲಿನ ಕಿಟಕಿಯ ಗಾಜಿಗೆ ಹಾನಿಯಾಗಿತ್ತು. ಈ ವಿಕೃತಿ ಭಾರೀ ನಾಚಿಕೆಗೀಡು ಮಾಡಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರೈಲ್ವೇ ಪೊಲೀಸರು ಆರೋಪಿಗಳ ಪತ್ತೆಗಾಗಿ 5 ತಂಡಗಳನ್ನು ರಚಿಸಿ, ಹಲವರನ್ನು ವಿಚಾರಣೆಗೆ ಒಳಪಡಿಸಿದ್ದರು. ತನಿಖೆ ನಂತರ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಬಂಧಿಸಿದ್ದಾರೆ.

Previous articleಹು- ಧಾ ಮಹಾನಗರ ಪಾಲಿಕೆ ಆಯುಕ್ತರಾಗಿ ಭರತ್ ಎಸ್ ನೇಮಕ
Next articleಆರೆಂಜ್ ಅಲಟ್೯: ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ