ವಂದೇ ಭಾರತ ರೈಲು ಸಂಚಾರ ಪ್ರಾರಂಭ

0
13

ಧಾರವಾಡ: ಉತ್ತರ ಕರ್ನಾಟಕ ಜನರ ಬಹುದಿನಗಳ ಬೇಡಿಕೆಯಾಗಿದ್ದ ತ್ವರಿತ ರೈಲು ಸಂಚಾರ ವಂದೇ ಭಾರತ್‌ಗೆ ಮಂಗಳವಾರ ವಿದ್ಯುಕ್ತವಾಗಿ ಚಾಲನೆ ದೊರೆಯಿತು.
ಧಾರವಾಡ ರೈಲು ನಿಲ್ದಾಣದಲ್ಲಿ ಸಂಚಾರಕ್ಕೆ ಸಿದ್ಧಗೊಂಡು ನಿಂತಿದ್ದ ವಂದೇ ಭಾರತ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ವೇದಿಕೆ ಮೂಲಕ ಚಾಲನೆ ನೀಡಿದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ರಾಜ್ಯಪಾಲ ಥಾವರಚಂದ‌ ಗೆಹ್ಲೋಟ್, ಶಾಸಕರಾದ ಅರವಿಂದ ಬೆಲ್ಲದ, ಎಸ್.ವಿ. ಸಂಕನೂರ, ಮಹಾಪೌರ ವೀಣಾ ಬರದ್ವಾಡ, ಉಪಮಹಾಪೌರ ಸತೀಶ ಹಾನಗಲ್ ಸೇರಿದಂತೆ ನೂರಾರು ಜನರು ಅದ್ಭುತ ಘಳಿಗೆಗೆ ಸಾಕ್ಷಿಯಾದರು.
ವಂದೇ ಭಾರತ ರೈಲು ಬೆಳಗಾವಿಯಿಂದ ಸಂಚಾರ ಮಾಡಬೇಕೆಂಬ ಬೇಡಿಕೆ ಜನರದ್ದಿದ್ದು, ಅದನ್ನು ಶೀಘ್ರದಲ್ಲಿಯೇ ಈಡೇರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭರವಸೆ ನೀಡಿದರು. ವಂದೇ ಭಾರತ ಎದುರು ಜನರ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಿದ್ದ ದೃಶ್ಯಗಳು ಕಂಡುಬಂದವು. ಅಲ್ಲದೇ ಬಹುತೇಕರಿಗೆ ಇಂದು ಉಚಿತವಾಗಿ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.

Previous articleಬಿಜೆಪಿಗರನ್ನು ಕೇಳಿ ಗ್ಯಾರಂಟಿ ಘೋಷಣೆ ಮಾಡಬೇಕಿತ್ತೇ?
Next article‘ಪ್ರತಿಮೆಗಿಂತ ಪ್ರಗತಿಯಲ್ಲಿ ನಂಬಿಕೆ ಇಟ್ಟವರು ನಾವು’