ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ಬಿ.ವೈ. ವಿಜಯೇಂದ್ರ ಅವರಿಗೆ ಸಂಸದ ಬಿ.ವೈ ರಾಘವೇಂದ್ರ ಶುಭ ಕೋರಿದ್ದಾರೆ.
ರಾಜ್ಯಾಧ್ಯಕ್ಷ ನೇಮಕ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು “ಹಿರಿಯರ ಆಶೀರ್ವಾದ ಹಾಗೂ ಕಿರಿಯರ ಬೆಂಬಲದೊಂದಿಗೆ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಿ ಮುನ್ನಡೆಸುತ್ತಾರೆ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು, ದಿ. ಅನಂತಕುಮಾರ್ ಅವರೇ ಮುಂತಾದ ನಾಯಕರುಗಳ ದಾರಿಯಲ್ಲಿ ನಡೆಯುತ್ತಾರೆ ಅನ್ನುವ ಭರವಸೆ ನನಗಿದೆ. ಅವರ ನಾಯಕತ್ವದಲ್ಲಿ ಪಕ್ಷ ಹೊಸ ಚೈತನ್ಯದೊಂದಿಗೆ ಬೆಳೆಯಲಿ, ರಾಜ್ಯವನ್ನು ಆವರಿಸಿಕೊಂಡಿರುವ ಕಾಂಗ್ರೆಸ್ ದುರಾಡಳಿತದ ಕಾರ್ಮೋಡದ ನಡುವೆ ಭರವಸೆಯ ಒಂದು ಹೊಸ ಕಿರಣವಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.