ವಿದ್ಯುತ್​​ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ಬೆಂಗಳೂರಿನಲ್ಲಿ ರೈತರಿಂದ ಪ್ರತಿಭಟನೆ..

0
37

ಬೆಂಗಳೂರು: ವಿದ್ಯುತ್​​ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ಬೆಂಗಳೂರಿನಲ್ಲಿ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್​​​​ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ.

ರಾಜ್ಯದಲ್ಲಿ ಕೃಷಿ ತಿದ್ದುಪಡಿ ಕಾಯ್ದೆ ವಾಪಸ್​ ಪಡೆಯಬೇಕು, ವೈಜ್ಞಾನಿಕ ರೀತಿಯಲ್ಲಿ ಬೆಳೆಹಾನಿ ಪರಿಹಾರ ನೀಡ್ಬೇಕು ಎಂಬ ಆಗ್ರಹ ಮುಂದಿಟ್ಟುಕೊಂಡು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಟಿ ರೈಲ್ವೆ ನಿಲ್ದಾಣದಲ್ಲಿ ಸಾವಿರಾರು ರೈತರು ಜಮಾಯಿಸಿದ್ದು ವಿಧಾನಸೌಧದವರೆಗೂ ಬೃಹತ್ ರ್ಯಾಲಿ ನಡೆಸಲು ಮುಂದಾಗಿದ್ದಾರೆ. ಆದರೆ ಪೊಲೀಸರು ಸಿಟಿ ರೈಲು ನಿಲ್ದಾಣ ಬಳಿಯೇ ರೈತರನ್ನು ತಡೆದಿದ್ದಾರೆ. ಈ ವೇಳೆ ವಾಗ್ವಾದ ನಡೆದಿದೆ.

Previous articleನೈಋತ್ಯ ರೈಲ್ವೆ; ಜಿಡಿಸಿಇ ಹುದ್ದೆ ನೇಮಕಾತಿಯಲ್ಲಿ ಅಕ್ರಮ; ಹುದ್ದೆ ಆಕಾಂಕ್ಷಿಗಳಿಂದ ಪ್ರತಿಭಟನೆ
Next articleಜ್ಞಾನವಾಪಿ ಮಹಾ ತೀರ್ಪು… ವಾರಾಣಸಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್…