ವಿದ್ಯುತ್ ವಿತರಣಾ ಕೇಂದ್ರದಲ್ಲಿ ಬೆಂಕಿ: ಅಪಾರ ಹಾನಿ

0
30

ಬೆಳಗಾವಿ(ಅಥಣಿ, ರಡ್ದೆರಹಟ್ಟಿ): ಭಾರಿ ಬೆಂಕಿ ಅವಘಡ ಸಂಭವಿಸಿ ವಿದ್ಯುತ್ ಟಿಸಿ ಸೇರಿದಂತೆ ವಿದ್ಯುತ್ ಸಲಕರಣೆಗಳು ಸುಟ್ಟು ಕರಕಲಾಗಿ ಲಕ್ಷಾಂತರ ರೂ. ಹಾನಿ ಸಂಭವಿಸಿದ ಘಟನೆ ಅಥಣಿಯ ಹೊರವಲಯದ ೧೧೦ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಗುರುವಾರ ಸಂಭವಿಸಿದೆ.
ಕೇಂದ್ರದಲ್ಲಿ ಭಾರೀ ಶಬ್ದದೊಂದಿಗೆ ಕೆಇಬಿ ಟ್ರಾನ್ಸ್ಫಾರ್ಮರ್ ಸ್ಫೋಟಗೊಂಡಿದೆ. ಜತೆಗೆ ದೊಡ್ಡ ಬೆಂಕಿ ಕಾಣಿಸಿಕೊಂಡಿದೆ. ಭಾರೀ ಪ್ರಮಾಣದ ಬೆಂಕಿ ಆವರಿಸಿದ್ದರಿಂದ ಪಟ್ಟಣದಲ್ಲಿ ಕೆಲಕಾಲ ಆಂತಕ ಸೃಷ್ಟಿಯಾಗಿತ್ತು. ಅಲ್ಲದೆ ಕೆಲವು ಗಂಟೆಗಳ ಕಾಲ ವಿಜಯಪುರ-ಅಥಣಿ ರಸ್ತೆ ಬಂದ್ ಮಾಡಲಾಗಿತ್ತು. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Previous articleನ್ಯಾಯ ಕೇಳಬೇಕಿರೋದು ಪರಮೇಶ್ವರ್-ಖರ್ಗೆ
Next articleಸಿಕಂದರಾಬಾದ್‌ನಲ್ಲಿ ಬೆಂಕಿ ಅವಘಡ