ಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿದರು. ಪ್ರಸ್ತಾವವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಮೋದಿಸಿದರು. ಬಿಜೆಪಿ, ಜೆಡಿಎಸ್ ಅಭ್ಯರ್ಥಿ ಹಾಕದ ಹಿನ್ನೆಲೆಯಲ್ಲಿ 23ನೇ ಸ್ಪೀಕರ್ ಆಗಿ ಖಾದರ್ ಅವರನ್ನು ಅವಿರೋಧವಾಗಿ ಘೋಷಣೆ ಮಾಡಲಾಯಿತು.